ಇದು ಅನುಕ್ಷಣದ ಮಾತು. ಇದು ನನ್ನ ಮಾತು, ನಿಮ್ಮ ಮಾತು. ಹಾಗೆಂದು ಬರೀ ಮಾತಾಗದೇ ಅಕ್ಷರಗಳಲ್ಲಿ ಅರಳಿದ ಮಾಲೆ. ಇದು ಪ್ರತಿ ಗುರುವಾರದ ಅಂಕಣ.

ಮುಂದೆ ಓದಿ...

ಇದು ಸುದ್ದಿ ಮಾಡುವ ಪತ್ರಕರ್ತರು, ಪತ್ರಿಕೆ, ಪತ್ರಿಕಾಲಯ ಹಾಗೂ ಇಡೀ ಮಾಧ್ಯಮರಂಗದ ಸೂಕ್ಷ್ಮ ಮತ್ತು ಕುತೂಹಲ ಸಂಗತಿಗಳೆಲ್ಲ ಕತೆಯಾಗಿ ಅರಳುವ ಬಗೆ... ಈ ಕತೆ ಪ್ರತಿ ಶನಿವಾರ.

ಮುಂದೆ ಓದಿ...

ಜೀವ, ಜೀವನ ಎಲ್ಲಿ ಇರುವುದೋ ಅಲ್ಲೆಲ್ಲ ಸಂತಸ, ವಿಷಾದ, ನೋವು, ನಲಿವು ಸಹಜ. ಯಾವ ಸಂಗತಿ, ಯಾರ ಜೀವನವೂ ನೀರಸ ಅಲ್ಲ. ಅಂಥ ಜನಜೀವನ, ಜನಗಳ ಮನ ಹೇಗಿದ್ದೀತು? ಇದು ಪ್ರತಿ ಭಾನುವಾರದ ಸರತಿ.

ಮುಂದೆ ಓದಿ...

ಎಲ್ಲವುಗಳಿಗೂ ಒಂದು ನಿಯಮವಿದೆ ತಾನೆ? ನಮ್ಮ ಜೀವನಕ್ಕೂ ಅಂಥ ನಿಯಮವಿದ್ದರೆ ಹೇಗೆ? ಬದುಕಿಗೆ ಸುಂದರ ನಿಯಮಗಳ ತೋರಣ ಕಟ್ಟಿ ಇನ್ನಷ್ಟು ಚೆಂದಗೊಳಿಸುವುದಾದರೆ ಎಷ್ಟು ಸೊಗಸು ಅಲ್ಲವಾ? ಇದು ಪ್ರತಿ ದಿನದ ಅಂಕಣ

ಮುಂದೆ ಓದಿ...

ಕೆಲವರು ಹಲ್ಲುಜ್ಜಿದರೆ ಕ್ಲೀನಾಗೋದು ಬ್ರಶ್! ನಾವು ನೋಡುವ ಪ್ರತಿ ಪ್ರಸಂಗದಲ್ಲೂ ಹಾಸ್ಯ, ವಾರೆನೋಟ ಬೀರಿದರೆ ಹುಟ್ಟುವ ಮಿಂಚೇ ವಕ್ರತುಂಡೋಕ್ತಿ.

ಮುಂದೆ ಓದಿ...

ಕೆಲವರಿಗೆ ಗುಲಾಬಿ ಅಂದ್ರೆ ಮುಳ್ಳು, ಇನ್ನು ಕೆಲವರಿಗೆ ಹೂವು. ಪ್ರತಿಯೊಂದರಲ್ಲೂ ಸಕಾರಾತ್ಮಕ ಭಾವ ಕಾಣುವುದೇ ಉದ್ದೇಶವಾದರೆ ಬದುಕಿನ ಗತಿಯೇ ಬದಲಾವಣೆಯಾದೀತು. ಒಂದು ಪುಟ್ಟ ವಾಕ್ಯ ನಮ್ಮಲ್ಲಿ ಉಂಟುಮಾಡುವ ಸೆಳೆತವೇ ಇದು! ಇದಕ್ಕೆ ಅಂತಾರೆ ಸ್ಪೂರ್ತಿ ಸೆಲೆ.

ಮುಂದೆ ಓದಿ...

ಓದುವಾಗ, ಸುಮ್ಮನಿದ್ದಾಗ ನಮ್ಮ ಮನದಲ್ಲಿ ಹಲವು ಕುತೂಹಲ ಹುಟ್ಟಿಸುವ ಯೋಚನೆಗಳು ಹಾದು ಹೋಗುವುದುಂಟು. ಅವುಗಳಿಗೆಲ್ಲ ತಡೆಗೋಡೆ ನಿರ್ಮಿಸಿದರೆ ಹೇಗೆ? ಅಂಥ ಯೋಚನೆಗಳು ಸುಳಿದಾಗಲೆಲ್ಲ ಇಲ್ಲಿ ಹಾಜರ್!

ಮುಂದೆ ಓದಿ...

ನೀವು ಏನ್ ಬೇಕಾದ್ರೂ ಕೇಳಬಹುದು. ಆದರೆ ನಾವು ಏನ್ ಬೇಕಾದ್ರು ಹೇಳೊಲ್ಲ, ಬದಲು ಹೇಳಬೇಕಾದುದನ್ನೇ ಹೇಳುತ್ತೇವೆ. ಕೇಳುವವರು ಸರಿಯಾಗಿ ಕೇಳಬೇಕಷ್ಟೇ.

ಮುಂದೆ ಓದಿ...

ಹುಡುಗ-ಹುಡುಗಿಯರಲ್ಲಿ ಲವ್ ಹುಟ್ಟಲು ಔಷಧಿ ಇದೆಯೇ?

ಕೇಳ್ರಪ್ಪೋ ಕೇಳಿ

love_hd-normal* ತಲವಾಟ ಮಂಜುನಾಥ, ಸಾಗರ, 9480931611
ಹುಡುಗ-ಹುಡುಗಿಯರಲ್ಲಿ ಲವ್ ಹುಟ್ಟಲು ಔಷಧಿ ಇದೆಯೇ?
ಲವ್ ಹುಟ್ಟೋದಕ್ಕೇ ಔಷಧಿ ಬೇಕು ಅಂದ್ರೆ ಮುಂದಿಂದೆಲ್ಲ ಹೇಗೆ ಮಾರಾಯಾ?

* ಐಗೂರು ರವಿಪ್ರಿಯ, ಕೊಡಗು, 9483111096
ನಮ್ಮ ರಾಜ್ಯ ಸರ್ಕಾರದಿಂದ ಒಂದು ರುಪಾಯಿ ಕೆಜಿ ಅಕ್ಕಿ ಪಡೆದು, ಕೇಂದ್ರ ಸರ್ಕಾರ ನೀಡುವ ಸಾವಿರಾರು ರುಪಾಯಿಯ ‘ಗ್ಯಾಸ್‌’ನಲ್ಲಿ ಅಡುಗೆ ಮಾಡುವುದು ಹೇಗೆ?
ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಇಸ್ಕೊಳ್ಳೋದು ಅಂದ್ರೆ ಇದೇ ನೋಡಿ.

* ಹರಳಹಳ್ಳಿ ಪುಟ್ಟರಾಜು, ಪಾಂಡವಪುರ, 9632838088
ಸಾಹಿತಿಗಳೆಲ್ಲ ಲೇಖಕಿಯರನ್ನೇ ಮದುವೆಯಾಗಿದ್ದರೆ?
ಸಾಹಿತ್ಯ ಲೋಕದಲ್ಲೂ ಕುಟುಂಬ ರಾಜಕಾರಣ ಕಾಣಿಸಿಕೊಳ್ಳುತ್ತಿತ್ತು.

* ಸಿ. ನಾಗರಾಜ ಅರದೋಟ್ಲು, ಭದ್ರಾವತಿ
ಶಿಲ್ಪಿಯ ಆತ್ಮ ಕುಂಚ. ಸಂಸಾರದ ಆತ್ಮ?
ಮಂಚ!

* ತಲವಾಟ ಮಂಜುನಾಥ, ಸಾಗರ, 9480931611
ನನ್ನನ್ನು ಪ್ರೇಮಿಸಿ ಮೋಸ ಮಾಡಿದ ಹುಡುಗಿ ಬರುವ ದೀಪಾವಳಿಗೆ ಏನಾದರೂ ಆಫರ್ ಕೊಡಬಹುದೇ?
ಮದುವೆ ದಿನ ಬಂದು ಪಟಾಕಿ ಹೊಡೆಯದಿದ್ದರೆ ಸಾಕು!

-ಬಾಣಭಟ್ಟ

ಅಭಿಪ್ರಾಯ ಬರೆಯಿರಿ

ನಿಮ್ಮ ಸಂದೇಶ:

Please note: comment moderation is enabled and may delay your comment. There is no need to resubmit your comment.